ಸರ್ಕಾರದ ಆದೇಶದನ್ವಯ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಕೆಯಾಗದಿದ್ದರೆ ಅಧಿಕಾರಿಗಳ ವಿರುದ್ದ ತಾಲ್ಲೂಕು ಕಚೇರಿ ಮುಂದೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಕರ್ನಾಟಕ ಯುವ ವೇದಿಕೆ ರಾಜ್ಯಾಧ್ಯಕ್ಷ ರೂಪೇಶ್ ರಾಜಣ್ಣ ತಿಳಿಸಿದರು.
ನಾಲ್ಕೂವರೆ ವರ್ಷಗಳ ಕಾಲ ರಾಜಕೀಯದಿಂದ ಅಂತರ ಕಾಯ್ದುಕೊಂಡಿದ್ದ ಸಂಸದ ಅನಂತಕುಮಾರ ಹೆಗಡೆ ಈಚೆಗೆ ಹಠಾತ್ತಾಗಿ ಕಾಣಿಸಿಕೊಂಡು ಎಲ್ಲೆಡೆ ಮಿಂಚಿನಂತೆ ಸಂಚರಿಸುತ್ತಿರುವುದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಗಳಲ್ಲಿ ತಳಮಳ ಉಂಟು ಮಾಡಿದೆ.