ಪ್ರಾಚೀನ ಇತಿಹಾಸವಿರುವ ಕನ್ನಡ ಬೆಳೆಸಲು ಮಾತೃ ಹೃದಯ ಇರಬೇಕು. ಮಾತೃ ಹೃದಯ ಹಿಡಿತ ಸಾಧಿಸುವುದಿಲ್ಲ, ಪ್ರೀತಿ ಹಂಚುತ್ತದೆ ಎಂದು ಚಿತ್ರ ನಿರ್ದೇಶಕ ಟಿ.ಎಸ್.ನಾಗಾಭರಣ ಅಭಿಪ್ರಾಯಪಟ್ಟಿದ್ದಾರೆ.
ಸರ್ಕಾರದ ಎಲ್ಲಾ ಇಲಾಖೆಗಳು ಆಡಳಿತದಲ್ಲಿ ಕಡ್ಡಾಯವಾಗಿ ಪೂರ್ಣ ಪ್ರಮಾಣದಲ್ಲಿ ಕನ್ನಡ ಬಳಸಬೇಕು. ಸರ್ಕಾರಿ ಕಚೇರಿಗಳ ನಾಮಫಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಬೇಕು. ಈ ಸೂಚನೆ ಉಲ್ಲಂಘಿಸಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಸುತ್ತೋಲೆ ಹೊರಡಿಸಿದ್ದಾರೆ.