ಜಿಲ್ಲೆಯಲ್ಲಿ ಮೊಳಗಿತು ಕನ್ನಡ ಕಲರವ
Nov 02 2024, 01:20 AM ISTಕನ್ನಡಪ್ರಭ ವಾರ್ತೆ ವಿಜಯಪುರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ 69ನೇ ಕನ್ನಡ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಹಾಗೂ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಾಯಿ ಭುವನೇಶ್ವರಿ ತಾಯಿಗೆ ಪುಷ್ಪನಮನ ಅರ್ಪಿಸಿ ಗೌರವ ಸಲ್ಲಿಸಿದರು. ಬಳಿಕ ಸಚಿವ ಎಂ.ಬಿ.ಪಾಟೀಲ್ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು, ಇದೇ ವೇಳೆ ರಾಷ್ಟ್ರಗೀತೆ ಹಾಗೂ ನಾಡಗೀತೆಗಳು ಮೊಳಗಿದವು. ಬಳಿಕ ತೆರೆದ ವಾಹನದಲ್ಲಿ ಸಚಿವರು ಕವಾಯತು ತಂಡಗಳ ವೀಕ್ಷಣೆ ಮಾಡಿದರು.