೧೦ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರದ ಸಿದ್ಧತೆ
Nov 21 2024, 01:03 AM ISTಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ: ತಾಲೂಕಿನ ಇವಣಗಿ ಗ್ರಾಮದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಡಿ.೨ರಂದು ಹಮ್ಮಿಕೊಂಡಿರುವ ಬಸವನಬಾಗೇವಾಡಿ ತಾಲೂಕು 10ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅವಿಸ್ಮರಣೀಯವಾಗಿ ಮಾಡುವ ನಿಟ್ಟಿನಲ್ಲಿ ಎಲ್ಲ ಇಲಾಖೆಯ ಅಧಿಕಾರಿಗಳು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ಎಲ್ಲ ಕನ್ನಡದ ಮನಸ್ಸುಗಳು ತನು-ಮನ-ಧನದಿಂದ ಸಹಕಾರ ನೀಡುವ ಮೂಲಕ ಸಮ್ಮೇಳನದ ಯಶಸ್ವಿಗೆ ಸಹಕಾರ ನೀಡುವ ಅಗತ್ಯವಿದೆ ಎಂದು ತಹಸೀಲ್ದಾರ್ ವೈ.ಎಸ್.ಸೋಮನಕಟ್ಟಿ ಹೇಳಿದರು.