ಜ.2ರಂದು 10ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ
Jan 01 2024, 01:15 AM ISTಸಾಹಿತ್ಯ, ಸಾಹಿತಿಯ ಅವತಾರ ಆಗಬೇಕಾದರೆ ಅದಕ್ಕೆ ವಯಸ್ಸಿನ ಅಂತರವಿಲ್ಲ. ಚಿಕ್ಕಂದಿನಿಂದಲೇ ಮಕ್ಕಳಿಗೆ ಸಾಹಿತ್ಯ ಹವ್ಯಾಸ ಬೆಳೆಸಿದರೆ ಅವರು ಭವಿಷ್ಯದಲ್ಲಿ ದೇಶಕ್ಕೆ ಆಸ್ತಿಯಾಗುತ್ತಾರೆ ಎಂಬ ನಿಟ್ಟಿನಲ್ಲಿ ಮಕ್ಕಳ ಸಾಹಿತ್ಯ ಸಮ್ಮೇಳನಗಳು ಜಾರಿಯಲ್ಲಿವೆ. ಭದ್ರಾವತಿಯಲ್ಲೂ 10ನೇ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜ.2ರಂದು ವೇದಿಕೆ ಸಜ್ಜಾಗಿದೆ. ಸತ್ಯಸಾಯಿ ಪ್ರೌಢಶಾಲೆ ವಿದ್ಯಾರ್ಥಿನಿ ಕೆ.ಆರ್.ಸೇವಂತಿ ಸಮ್ಮೇಳನಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷೆ ಎಂ.ಎಸ್. ಸುಧಾಮಣಿ ಹೇಳಿದ್ದಾರೆ.