ಕನ್ನಡ ನಾಮಫಲಕ ಕಡ್ಡಾಯಕ್ಕೆ ಕರವೇ ಒತ್ತಾಯ
Oct 07 2024, 01:33 AM ISTಕನ್ನಡಪ್ರಭ ವಾರ್ತೆ ಕೊಲ್ಹಾರ ಪಟ್ಟಣದ ಅಂಗಡಿ ಮುಂಗಟ್ಟುಗಳಿಗೆ ಕಡ್ಡಾಯವಾಗಿ ಕನ್ನಡ ನಾಮಫಲಕ ಅಳವಡಿಸಬೇಕೆಂದು ಒತ್ತಾಯಿಸಿ ಕೊಲ್ಹಾರ ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣಗೌಡ ಬಣ)ದಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ದಿಗಂಬರೇಶ್ವರ ಮಠದ ಕಲ್ಲಿನಾಥ ಶ್ರೀಗಳು ಹಾಗೂ ಕರವೇ ಅವಳಿ ಜಿಲ್ಲೆ ಉಸ್ತುವಾರಿ ಸುರೇಶ ಹಾರಿವಾಳ ನೇತೃತ್ವದಲ್ಲಿ ಹಮ್ಮಿಕೊಂಡ ಪ್ರತಿಭಟನಾ ಮೆರವಣಿಗೆ ದಿಗಂಬರೇಶ್ವರ ಮಠದಿಂದ ಆರಂಭವಾಗಿ ಬಸವೇಶ್ವರ ವೃತ್ತದವರೆಗೆ ಸಾಗಿತು.