ನಾಮಫಲಕದಲ್ಲಿ ಕನ್ನಡ ಭಾಷೆ ಶೇ.60 ರಷ್ಟು ಅನುಷ್ಠಾನಕ್ಕೆ ಡಿಸಿ ಸೂಚನೆ
May 15 2024, 01:35 AM ISTಜಿಲ್ಲೆಯ ಎಲ್ಲಾ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಕಡ್ಡಾಯ ಅನುಷ್ಠಾನ ಸಂಬಂಧ ಅಧಿಕಾರಿಗಳ ಜೊತೆ ಮಂಗಳವಾರ ವಿಡಿಯೋ ಸಂವಾದದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಪಾಲ್ಗೊಂಡರು. ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕಕ್ಕೆ ಈಗಾಗಲೇ ಒಪ್ಪಿಗೆ ದೊರೆತಿದ್ದು, ಜಿಲ್ಲೆಯ ಎಲ್ಲಾ ಕೈಗಾರಿಕೆಗಳು, ವಾಣಿಜ್ಯ ಸಂಸ್ಥೆಗಳು, ವಹಿವಾಟು ಕೇಂದ್ರಗಳು, ಉದ್ಯಮಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಇರಲೇಬೇಕು ಎಂದು ಸೂಚಿಸಿದರು.