ದ್ವಿತೀಯ ಪಿಯು ಫಲಿತಾಂಶ: ದಕ್ಷಿಣ ಕನ್ನಡ ರಾಜ್ಯಕ್ಕೆ ಪ್ರಥಮ
Apr 11 2024, 12:49 AM ISTದ್ವಿತೀಯ ಪಿಯು ಫಲಿತಾಂಶದಲ್ಲಿ ದ.ಕ.ಜಿಲ್ಲೆ ಈ ಬಾರಿ ಶೇ.97.37 ಫಲಿತಾಂಶ ದಾಖಲಿಸುವುದರೊಂದಿಗೆ ನಿರಂತರ ಅಗ್ರ ಸ್ಥಾನ ಕಾಯ್ದುಕೊಂಡಿದೆ. ಉಡುಪಿ ಶೇ.96.80 ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನ ಪಡೆದಿದೆ. ದ.ಕ.ಜಿಲ್ಲೆಗೆ ಈ ಬಾರಿ ಪಿಯುಸಿ ಫಲಿತಾಂಶದಲ್ಲಿ ಒಟ್ಟು 11 ಆಗ್ರ ಸ್ಥಾನ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೆನರಾ ಪಿಯು ಕಾಲೇಜಿನ ತುಳಸಿ ಪೈ 596 ಅಂಕಗಳೊಂದಿಗೆ ಟಾಪರ್ನಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಪಿಯು ಕಾಲೇಜಿನ ಗುಣಸಾಗರ್ 597 ಅಂಕಗಳೊಂದಿಗೆ ಟಾಪರ್ನಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.