ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಪುಂಡಲೀಕಪ್ಪ ಹುಗ್ಗಿ ಆಯ್ಕೆ
Jan 29 2024, 01:41 AM ISTಗುಳೇದಗುಡ್ಡ: ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು, ಜಿಲ್ಲಾ ಮತ್ತು ತಾಲೂಕು ಘಟಕಗಳ ಆಶ್ರಯದಲ್ಲಿ ಗುಳೇದಗುಡ್ಡ ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನ ಕಟಗೇರಿನಲ್ಲಿ ಫೆ.10ರಂದು ನಡೆಯುತ್ತಿದ್ದು, ಸಮ್ಮೇಳನದ ಸರ್ವಾಧ್ಯಕ್ಷರಾಗಿ ತಾಲೂಕಿನ ಕೊಂಕಣಕೊಪ್ಪ ಗ್ರಾಮದ ಡಾ.ಪುಂಡಲೀಕಪ್ಪ ಹುಗ್ಗಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಶಿವಾನಂದ ಶೆಲ್ಲಿಕೇರಿ ಹೇಳಿದರು. ಭಾನುವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.