ಸಿರಿಗೆರೆಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವಕ್ಕೆ ಸಿದ್ಧತೆ
Oct 31 2023, 01:16 AM ISTತರಳಬಾಳು ಜಗದ್ಗುರು ಬೃಹನ್ಮಠ ಮತ್ತು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಮೂರು ದಿನಗಳ ಕಾಲ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಿದ್ಧತೆ ನಡೆದಿದ್ದು, ಗುರುಶಾಂತೇಶ್ವರ ದಾಸೋಹ ಭವನದಲ್ಲಿ ತರಳಬಾಳು ಜಗದ್ಗುರು ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ನವೆಂಬರ್ ೩ ರಿಂದ ೫ರ ವರೆಗೆ ವಿವಿಧ ಚಿಂತನಾ ಗೋಷ್ಠಿಗಳು, ಉದಯೋನ್ಮುಖ ಕವಿಗಳ ಗೋಷ್ಠಿ, ಸಾಂಸ್ಕೃತಿಕ ಚಟುವಟಿಕೆಗಳು, ಕನ್ನಡ ಗೀತೆಗಳ ಗಾಯನ, ನಾಟಕಗಳು ನಡೆಯಲಿವೆ.