ಕನ್ನಡ ಸಮರ್ಪಕ ಅನುಷ್ಠಾನಕ್ಕೆ ಅಧಿಕಾರಿಗಳು ಶ್ರಮಿಸಲಿ
Jul 12 2025, 12:32 AM ISTಸರ್ಕಾರಿ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುವ ಶೇ.60ರಷ್ಟು ಅಧಿಕಾರಿಗಳು, ಸಿಬ್ಬಂದಿ ತಮ್ಮ ಮಕ್ಕಳನ್ನು ಕನ್ನಡ ಶಾಲೆಗಳಿಗೆ ಸೇರಿಸುವುದಿಲ್ಲ. ಪ್ರತಿಯೊಬ್ಬರು ಆಂಗ್ಲ ಮಾಧ್ಯಮ ಶಾಲೆಗಳಿಗೆ ಸೇರಿಸಲು ಮುಂದಾಗುತ್ತಾರೆ. ಮೊದಲು ಸರ್ಕಾರಿ ಅಧಿಕಾರಿಗಳು, ನೌಕರರು ಇದನ್ನು ಬದಲಾಯಿಸಿಕೊಂಡಲ್ಲಿ, ಇನ್ನಷ್ಟು ಪರಿಣಾಮಕಾರಿಯಾಗಿ ಕನ್ನಡ ಅನುಷ್ಠಾನಗೊಳಿಸಲು ಸಾಧ್ಯವಾಗಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಹೇಳಿದರು.