ಕನ್ನಡ ನೆಲದಲ್ಲಿ ಹುಟ್ಟಿ ಸಾಹಿತ್ಯ ಲೋಕವನ್ನು ಬೆಳಗಿದ ಆರ್.ನರಸಿಂಹಾಚಾರ್, ಬಿ.ಎಂ.ಶ್ರೀ, ಪು.ತಿ.ನರಸಿಂಹಾಚಾರ್, ಎ.ಎನ್.ಮೂರ್ತಿರಾವ್, ಕೆ.ಎಸ್.ನರಸಿಂಹಸ್ವಾಮಿ, ಡಾ.ಹೆಚ್.ಎಲ್.ನಾಗೇಗೌಡ, ಪ್ರೊ.ಜಿ.ವೆಂಕಟಸುಬ್ಬಯ್ಯ ಅವರು ಸಮ್ಮೇಳನದ ಅಧ್ಯಕ್ಷರಾಗಿ ಮಂಡ್ಯ ಜಿಲ್ಲೆಗೆ ಗರಿ ಮೂಡಿಸಿದ್ದಾರೆ.
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾದ ಗೊ.ರು. ಚನ್ನಬಸಪ್ಪ ಅವರು ನಾಡು ನುಡಯ ಸಮಸ್ಯೆಯ, ಕೈಗೊಳ್ಳಬೇಕಾದ ಕ್ರಮಗಳು ಇತ್ಯಾದಿ ಕುರಿತು ತಮ್ಮ ಒಳನೋಟಗಳನ್ನು ಹಂಚಿಕೊಂಡಿದ್ದಾರೆ.