₹೩.೮೦ ಕೋಟಿ ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣದ ಗುರಿ
Apr 04 2025, 12:48 AM ISTಭದ್ರಾವತಿ: ತಾಲೂಕಿನಲ್ಲಿ ಸಾಹಿತ್ಯ, ಕನ್ನಡಾಭಿಮಾನಿಗಳು ಹಾಗೂ ಸಮಸ್ತ ನಾಗರಿಕರ ಬಹುಬೇಡಿಕೆಯಾಗಿರುವ ಕನ್ನಡ ಸಾಹಿತ್ಯ ಭವನ ನಿರ್ಮಾಣ ಮಾಡುವ ಆಶಯ ಇದೀಗ ಈಡೇರುತ್ತಿದ್ದು, ಸುಮಾರು ೩.೮೦ ಕೋಟಿ ರು. ವೆಚ್ಚದಲ್ಲಿ ಮಾದರಿ ಭವನ ನಿರ್ಮಿಸುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಆರ್ಥಿಕ ನೆರವಿನೊಂದಿಗೆ ಎಲ್ಲಾ ರೀತಿಯ ಸಹಕಾರ ನೀಡುವಂತೆ ಕನ್ನಡ ಸಾಹಿತ್ಯ ಭವನ ನಿರ್ಮಾಣ ಸಮಿತಿ ಅಧ್ಯಕ್ಷೆ ಎಮೆರಿಟಸ್ ಪ್ರಾಧ್ಯಾಪಕಿ ಡಾ.ವಿಜಯದೇವಿ ಮನವಿ ಮಾಡಿದರು.