ಪ್ರತಿ ಮನೆಯಲ್ಲೂ ಮಕ್ಕಳಿಗೆ ಕನ್ನಡ ಕಲಿಸಿ
Nov 07 2024, 11:50 PM ISTಪುರಸಭೆ ಅಧ್ಯಕ್ಷ ಎ ಆರ್ ಅಶೋಕ್ ಭುವನೇಶ್ವರಿಗೆ ಪುಷ್ಪಾರ್ಚನೆ ನಡೆಸಿ ಮಾತನಾಡಿ ಕಲೆ, ಸಾಹಿತ್ಯ, ಸಂಸ್ಕೃತಿಯ ತವರೂರು ನಮ್ಮ ಕನ್ನಡ ನಾಡು, ಕನ್ನಡ ಭಾಷೆ ಅತ್ಯಂತ ಶ್ರೀಮಂತ ಭಾಷೆ. ಕನ್ನಡದ ಪ್ರಥಮ ಶಿಲಾ ಶಾಸನ ನಮ್ಮ ತಾಲೂಕಿನ ಹಲ್ಮಿಡಿ ಗ್ರಾಮದಲ್ಲಿ ಸಿಕ್ಕಿರುವುದು ಕನ್ನಡಿಗರಾದ ನಮಗೆ ಹೆಮ್ಮೆಯ ಸಂಗತಿ ಎಂದರು. ಇಂತಹ ಪವಿತ್ರ ಭಾಷೆಯನ್ನು ಕನ್ನಡಿಗರಾದ ನಾವು ಪ್ರತಿ ಮನೆಯಲ್ಲೂ ಮಕ್ಕಳಿಗೆ ಕಲಿಸಬೇಕು. ನಿತ್ಯವೂ ಕನ್ನಡ, ಎಂದೆಂದಿಗೂ ಕನ್ನಡ ಎನ್ನುವಂತೆ ಕನ್ನಡಿಗರಲ್ಲಿ ಅರಿವು ಮೂಡಿಸಬೇಕು ಎಂದರು.