ಕನ್ನಡ ಭಾಷೆ ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರದ್ದು
Oct 18 2024, 01:26 AM ISTಶಿಕಾರಿಪುರ: ಕನ್ನಡ ಭಾಷೆ, ಸಂಸ್ಕೃತಿ, ಪರಂಪರೆ ಉಳಿಸಿ ಬೆಳೆಸುವ ದಿಸೆಯಲ್ಲಿ ಸಂಚರಿಸುತ್ತಿರುವ ರಥಯಾತ್ರೆಯು ತಾಲೂಕಿಗೆ ಆಗಮಿಸಿದ್ದು ಪ್ರತಿಯೊಬ್ಬ ಕನ್ನಡಿಗ ಹೆಮ್ಮೆ ಪಡಬೇಕಾಗಿದೆ. ಕನ್ನಡ ಭಾಷೆ, ಸಂಸ್ಕೃತಿಗೆ ದೊಡ್ಡ ಕೊಡುಗೆ ನೀಡಿದ ತಾಲೂಕಿನ ಶ್ರೇಷ್ಠತೆಯನ್ನು ಯಾತ್ರೆ ಎತ್ತಿಹಿಡಿದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ಹೆಮ್ಮೆ ವ್ಯಕ್ತಪಡಿಸಿದರು.