ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಮಲೆನಾಡು ಸೇರಿ ರಾಜ್ಯದ ಹಲವೆಡೆ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಗುಡ್ಡ ಕುಸಿತ ಕೂಡ ಮುಂದುವರಿದಿದೆ. ಗುಡ್ಡ ಕುಸಿತದಿಂದಾಗಿ ಕರ್ನಾಟಕ- ಗೋವಾ, ಮಂಗಳೂರು-ಬೆಂಗಳೂರು, ಮಡಿಕೇರಿ-ಮಂಗಳೂರು ಸೇರಿ 9ಕ್ಕೂ ಹೆಚ್ಚು ಹೆದ್ದಾರಿಗಳು ಬಂದ್ ಆಗಿದೆ. ವಾಹನ ಸವಾರರಿಗೆ ಎಚ್ಚರಿಕೆ ನೀಡಲಾಗಿದೆ.