ಕನ್ನಡಕ್ಕೆ ಕುತ್ತು ಬಂದಾಗಲೆಲ್ಲ ಹೋರಾಟದ ಮುಂಚೂಣಿಯಲ್ಲಿರುವ ಮತ್ತು ಗೋಕಾಕ ಚಳವಳಿ, ಕನ್ನಡ ಸಾಹಿತ್ಯ ಪರಿಷತ್ ಜನ್ಮತಾಳಲು ಕಾರಣವಾದ 135 ವರ್ಷ ಇತಿಹಾಸ ಹೊಂದಿರುವ ಇಲ್ಲಿಯ ಕರ್ನಾಟಕ ವಿದ್ಯಾವರ್ಧಕ ಸಂಘವನ್ನು ರಾಜ್ಯ ಸರ್ಕಾರ ಮರೆತಿದೆ.
ರಾಜ್ಯ ಸರ್ಕಾರ ನೀಡುವ 70ನೇ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ‘ಕನ್ನಡಪ್ರಭ’ದ ಕಾರ್ಯನಿರ್ವಾಹಕ ಸಂಪಾದಕ ಅಂಶಿಪ್ರಸನ್ನ ಕುಮಾರ್, ಚಲನಚಿತ್ರ ನಟ ಪ್ರಕಾಶ್ ರೈ, ಹಿರಿಯ ಸಾಹಿತಿ ರಹಮತ್ ತರೀಕೆರೆ, ಪ್ರೊ.ರಾಜೇಂದ್ರ ಚೆನ್ನಿ ಸೇರಿ ವಿವಿಧ ಕ್ಷೇತ್ರಗಳ 70 ಮಂದಿ ಸಾಧಕರು ಭಾಜನರಾಗಿದ್ದಾರೆ.