ಕರ್ನಾಟಕ ಮಾಹಿತಿ ಆಯೋಗದಲ್ಲಿ 41 ಸಾವಿರ ಅರ್ಜಿ ಬಾಕಿ!
Sep 09 2025, 01:00 AM ISTರಾಮನಗರ: ಆಡಳಿತದಲ್ಲಿ ಪಾರದರ್ಶಕತೆ, ಅಧಿಕಾರಿಗಳಲ್ಲಿ ಕರ್ತವ್ಯ ನಿಷ್ಠೆ ಹಾಗೂ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಸಹಕಾರಿಯಾಗಿರುವ ಮಾಹಿತಿ ಹಕ್ಕು ಕಾಯ್ದೆ (ಆರ್ಟಿಐ) ಅಡಿಯಲ್ಲಿ ಸಲ್ಲಿಕೆಯಾಗುತ್ತಿರುವ ಅರ್ಜಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದ್ದು, ಕರ್ನಾಟಕ ಮಾಹಿತಿ ಆಯೋಗದ ಬಳಿ 41,856 ಮೇಲ್ಮನವಿ ಅರ್ಜಿಗಳು ವಿಚಾರಣೆಗೆ ಬಾಕಿ ಇವೆ.