‘ಕಳೆದ ಲೋಕಸಭಾ ಚುನಾವಣೆಯಲ್ಲಿ ಭಾರೀ ಭಾನಗಡಿ ಆಗಿದೆ. ಮತಗಳ್ಳತನ ಕುರಿತ ಸಾಕ್ಷ್ಯ ಹೇಳುವ ‘ಆಟಂ ಬಾಂಬ್’ ನನ್ನ ಬಳಿ ಇದೆ’ ಎಂದು ಹೇಳಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಇದೀಗ ದೇಶದಲ್ಲಿ ಚುನಾವಣಾ ವ್ಯವಸ್ಥೆ ಈಗಾಗಲೇ ಸತ್ತುಹೋಗಿದೆ ಎಂದು ಆರೋಪಿಸಿದ್ದಾರೆ.