ಉಭಯ ಸದನಗಳಲ್ಲಿ ಸೋಮವಾರದಿಂದ ಮೂರು ದಿನಗಳ ಕಾಲ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತ ಚರ್ಚೆ ಆರಂಭವಾಗಲಿದೆ. ಈ ಚರ್ಚೆ ನಡುವೆಯೇ ವಕ್ಫ್ ಕುರಿತು ಮುಖ್ಯಮಂತ್ರಿಗಳ ಉತ್ತರ, ಕೋವಿಡ್ ಹಗರಣ, ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ, ಮುನಿರತ್ನ ಪ್ರಕರಣ ಪ್ರಸ್ತಾಪಿಸಲು ಆಡಳಿತ ಪಕ್ಷ ಸಜ್ಜಾಗಿದೆ.