ಕರ್ನಾಟಕ ಜಾನಪದ ಅಕಾಡೆಮಿ ಕೊಡಮಾಡುವ 2024ನೇ ಸಾಲಿನ ‘ಡಾ.ಜೀ.ಶಂ.ಪ. ಪ್ರಶಸ್ತಿ’ಗೆ ಮೈಸೂರಿನ ಡಾ.ಮೈಲಹಳ್ಳಿ ರೇವಣ್ಣ ಹಾಗೂ ‘ಡಾ.ಬಿ.ಎಸ್.ಗದ್ದಗಿಮಠ ಪ್ರಶಸ್ತಿ’ಗೆ ವಿಜಯನಗರದ ಡಾ.ವೆಂಕಟೇಶ ಇಂದ್ವಾಡಿ ಆಯ್ಕೆಯಾಗಿದ್ದಾರೆ.
ಮಹಾರಾಷ್ಟ್ರದಲ್ಲಿ ಮರಾಠಿಗರ ಪುಂಡಾಟ ಮುಂದುವರಿದಿದ್ದು, ಗುರುವಾರ ತಡರಾತ್ರಿ ಪುಣೆ ಗೇಟ್ ಬಳಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ತಡೆದು, ಚಾಲಕನ ಮುಖಕ್ಕೆ ಮರಾಠಿ ಪುಂಡರು ಮಸಿ ಬಳಿದು ವಿಕೃತಿ ಮೆರೆದಿದ್ದಾರೆ.
ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ರುಪಾಯಿಗಳಷ್ಟು ಮೀಸಲಿಟ್ಟಿದ್ದು, ಈವರೆಗೆ 36 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಲಾಗಿದೆ. ಕರ್ನಾಟಕದ ಬಳಿಕ ಗ್ಯಾರಂಟಿ ಯೋಜನೆಗಳನ್ನು ಬೇರೆ ರಾಜ್ಯಗಳಲ್ಲೂ ಜಾರಿಗೊಳಿಸಿದ್ದಾರೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾ.22ರಂದು ಅಖಂಡ ಕರ್ನಾಟಕ ಬಂದ್‌ಗೆ ಕನ್ನಡಪರ ಸಂಘಟನೆಗಳ ಒಕ್ಕೂಟ ಕರೆ ನೀಡಿದೆ.
ಬಂದ್ ಆಗಿದ್ದ ಕರ್ನಾಟಕ- ಮಹಾರಾಷ್ಟ್ರ ಉಭಯ ರಾಜ್ಯಗಳ ನಡುವೆ ಗುರುವಾರ ಪೂರ್ಣ ಪ್ರಮಾಣದ ಬಸ್ ಸಂಚಾರ ಪುನಾರಂಭಗೊಂಡಿದೆ.