- ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟ

Nov 02 2023, 01:00 AM IST
ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಎಲ್ಲ ಧರ್ಮದವರು ಸೌಹಾರ್ದತೆಯಿಂದ ಬದುಕುತ್ತಿದ್ದಾರೆಂದು ಶಾಸಕ ಎಂ.ಚಂದ್ರಪ್ಪ ಹೇಳಿದರು. ಪಟ್ಟಣದ ಸಂವಿಧಾನ ಸೌಧದಲ್ಲಿ ಬುಧವಾರ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವದಲ್ಲಿ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದ ಅವರು, ಕರ್ನಾಟಕವೆಂದರೆ ಸರ್ವ ಧರ್ಮೀಯರು ಪ್ರೀತಿಸುವ ನೆಲವೆಂದರು. ಹಿಂದುಳಿದ ಜನಾಂಗದ ಬಗ್ಗೆ ಅಪಾರವಾದ ಕಾಳಜಿಯಿಟ್ಟುಕೊಂಡಿದ್ದ ಧೀಮಂತ ನಾಯಕ, ಹಿಂದುಳಿದ ವರ್ಗಗಳ ಹರಿಕಾರ ದಿವಂಗತ ಡಿ.ದೇವರಾಜ ಅರಸುರವರು ಮೈಸೂರನ್ನು ಕರ್ನಾಟಕವೆಂದು ನಾಮಕರಣ ಮಾಡಿ ಇಂದಿಗೆ ಐವತ್ತು ವರ್ಷಗಳಾಗಿದೆ. ಭಾರತದ ಭೂಪಟದಲ್ಲಿ ಕರ್ನಾಟಕ ರಾಜ್ಯಕ್ಕೆ ಅತ್ಯುತ್ತಮವಾದ ಸ್ಥಾನವಿದೆ. ಕನ್ನಡಕ್ಕೆ ಎಂಟು ಜ್ಞಾನಪೀಠ ಪ್ರಶಸ್ತಿಗಳು ಸಿಕ್ಕಿವೆ. ಭಾರತದ ಯಾವ ರಾಜ್ಯಕ್ಕೂ ಇಷ್ಟೊಂದು ಜ್ಞಾನಪೀಠ ಪ್ರಶಸ್ತಿಗಳು ದೊರತಿಲ್ಲವೆಂದರು.