ವಿಪಕ್ಷ ಕಾಂಗ್ರೆಸ್ ನಾಯಕರನ್ನು ಬುಧವಾರ ಲೋಕಸಭೆಯಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕರ್ನಾಟಕದಲ್ಲಿ ವಕ್ಫ್ ಮಂಡಳಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ, ವಕ್ಫ್ ಆಸ್ತಿ ಕಬಳಿಕೆ ವಿವಾದಗಳನ್ನು ಎಳೆಎಳೆಯಾಗಿ ಪ್ರಸ್ತಾಪಿಸಿ ಬಿಸಿ ಮುಟ್ಟಿಸಿದ್ದಾರೆ.
ದೆಹಲಿಯಲ್ಲಿ ಪುನರ್ ನಿರ್ಮಾಣಗೊಂಡಿರುವ ಕರ್ನಾಟಕ ಭವನ, ಕೇಂದ್ರ ಹಾಗೂ ರಾಜ್ಯದ ನಡುವೆ ರಾಯಭಾರ ಕಚೇರಿಯಾಗಿ ಕೆಲಸ ಮಾಡಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಶಾಭಾವ ವ್ಯಕ್ತಪಡಿಸಿದ್ದಾರೆ.
ದೇಶದ 25 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸುಮಾರು 13000 ಚದರ ಕಿಲೋಮೀಟರ್ನಷ್ಟು ಅರಣ್ಯ ಭೂಮಿ ಒತ್ತುವರಿ ಆಗಿದೆ. ಹೀಗೆ ಒತ್ತುವರಿಯಾದ ಪ್ರದೇಶವು ದೆಹಲಿ, ಸಿಕ್ಕಿಂ ಮತ್ತು ಗೋವಾ ರಾಜ್ಯಗಳ ಒಟ್ಟು ವಿಸ್ತೀರ್ಣಕ್ಕಿಂತಲೂ ಹೆಚ್ಚು.
ಮೈಸೂರು ವಿಶ್ವವಿದ್ಯಾಲಯದ ನಂತರ ರಾಜ್ಯದಲ್ಲಿ ಎರಡನೇ ಹಳೆಯ ವಿಶ್ವವಿದ್ಯಾಲಯ ಎಂಬ ಖ್ಯಾತಿಯ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಪ್ರಸ್ತುತ ಹೇಳತೀರದ ಆರ್ಥಿಕ ಸಂಕಷ್ಟದಲ್ಲಿದ್ದು, ಬರುವ ಜೂನ್ನಿಂದ ವಿಶ್ವವಿದ್ಯಾಲಯದ 1800 ನಿವೃತ್ತ ನೌಕರರಿಗೆ ಪಿಂಚಣಿ ಸ್ಥಗಿತಗೊಂಡರೂ ಅಚ್ಚರಿ ಇಲ್ಲ!
ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಸ್ವೀಕರಿಸದೆ, ಅರ್ಹರ ಸಾಧನೆ ಗುರುತಿಸಿ ಪ್ರಶಸ್ತಿಯನ್ನು ಮನೆಬಾಗಿಲಿಗೆ ಕೊಂಡೊಯ್ದು ನೀಡುವಂತಹ ಹೊಸ ಅಧ್ಯಾಯ ಆರಂಭಿಸುವ ಚಿಂತನೆಯಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್.ತಂಗಡಗಿ ಹೇಳಿದರು.