ಕಳ್ಳತನ, ಸುಲಿಗೆ: ಇಬ್ಬರು ಆರೋಪಿಗಳ ಬಂಧನ
Oct 07 2024, 01:34 AM ISTಕನ್ನಡಪ್ರಭ ವಾರ್ತೆ ವಿಜಯಪುರ ಹೊರ್ತಿ ಪೊಲೀಸ್ ಠಾಣೆ ವ್ಯಾಪ್ತಿಯ ಏಳು ಹಾಗೂ ದೇವರ ಹಿಪ್ಪರಗಿ ಠಾಣೆ ವ್ಯಾಪ್ತಿಯ ಒಂದು ಪ್ರಕರಣ ಸೇರಿ ಒಟ್ಟು ಎಂಟು ಕಳ್ಳತನ ಹಾಗೂ ಸುಲಿಗೆ ಪ್ರಕರಣಗಳನ್ನು ಜಿಲ್ಲಾ ಪೊಲೀಸರು ಬೇಧಿಸಿದ್ದು, ಅಂತಾರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಲ್ಲದೇ, ಸೆರೆಸಿಕ್ಕ ಆರೋಪಿಗಳಿಂದ 184 ಗ್ರಾಂ ಚಿನ್ನ ಮತ್ತು 80 ಗ್ರಾಂ ಬೆಳ್ಳಿ ಆಭರಣ ಜಪ್ತಿ ಮಾಡಲಾಗಿದೆ. ಇನ್ನುಳಿದ ಐವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ ತಿಳಿಸಿದ್ದಾರೆ.