ಗಾಯತ್ರಿ, ಬಿಜೆಪಿಗರ ಮೇಲೆ ಕಾಂಗ್ರೆಸ್ ಗೂಂಡಾಗಿರಿ ವಿರುದ್ಧ ಎಸ್‌ಪಿಗೆ ದೂರು
Apr 09 2024, 12:50 AM ISTಲೋಕಸಭೆ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹಾಗೂ ಮಹಿಳಾ ಕಾರ್ಯಕರ್ತೆಯರೊಂದಿಗೆ ನಗರದ ಎಸ್‌ಒಜಿ ಕಾಲನಿಯ ಪಾಲಿಕೆ ಸದಸ್ಯ ಸೇರಿದಂತೆ ಕಾಂಗ್ರೆಸ್ಸಿನ ಕೆಲವರು ಗೂಂಡಾ ವರ್ತನೆ ತೋರಿದ್ದಾರೆ. ಇಂತಹವರ ವಿರುದ್ಧ ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಮಹಿಳಾ ಮೋರ್ಚಾ ಸಂಚಾಲಕಿ ಎಚ್.ಸಿ. ಜಯಮ್ಮ ದಾವಣಗರೆಯಲ್ಲಿ ಒತ್ತಾಯಿಸಿದ್ದಾರೆ.