ದೇಶ ತುಂಡರಿಸುವುದೇ ಕಾಂಗ್ರೆಸ್ ಸಂಸ್ಕೃತಿ: ಕೋಟ ಶ್ರೀನಿವಾಸ್ ಪೂಜಾರಿ
Feb 03 2024, 01:48 AM ISTಮಡಿಕೇರಿಯಲ್ಲಿ ಶುಕ್ರವಾರ, ಕೊಡಗು ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರ ಪದಗ್ರಹಣ ಹಾಗೂ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಕಾರ್ಯಕ್ರಮದಲ್ಲಿ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂಬ ಸಂಸದ ಡಿ.ಕೆ ಸುರೇಶ್ ಹೇಳಿಕೆಯ ವಿಚಾರಕ್ಕೆ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ನ ಒಟ್ಟು ನೀತಿ ಯಾವತ್ತೂ ದೇಶವನ್ನು ಜೋಡಿಸುವುದಾಗಿರಲಿಲ್ಲ. ತುಂಡು ಮಾಡುವುದೇ ಅವರ ನೀತಿ ಆಗಿತ್ತು ಎಂದು ಅಭಿಪ್ರಾಯಪಟ್ಟರು.