ಕಾಂಗ್ರೆಸ್ ಸರ್ಕಾರ ಜನತೆ ಕ್ಷಮೆ ಕೇಳಲಿ: ಮಾಜಿ ಡಿಸಿಎಂ ಕಾರಜೋಳ
Jan 31 2024, 02:19 AM ISTಲೋಕಾಪುರ: ಬಿಜೆಪಿ ಸರ್ಕಾರದಲ್ಲಿ ಶೇ.೪೦ರಷ್ಟು ಕಮಿಷನ್ ಕುರಿತು ಆರೋಪ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ 8 ತಿಂಗಳಾದರೂ ಸಾಬೀತು ಪಡಿಸುವಲ್ಲಿ ವಿಫಲವಾಗಿದೆ. ಹೀಗಾಗಿ ಕಾಂಗ್ರೆಸ್ ಕರ್ನಾಟಕ ಜನತೆಯ ಕ್ಷಮೆ ಕೇಳಬೇಕು ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಆಗ್ರಹಿಸಿದರು. ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ೨೦೧೩ ರಿಂದ ೨೦೨೩ರವರೆಗೆ ನಡೆದ ಭ್ರಷ್ಟಾಚಾರ ಆರೋಪದ ಬಗ್ಗೆ ಸಮಗ್ರ ತನಿಖೆ ಮಾಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.