ಸಂಸದ ಅನಂತಕುಮಾರ್ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
Jan 18 2024, 02:01 AM ISTಬೀಳಗಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ಅವಹೇಳನಕಾರಿಯಾಗಿ ಹಾಗೂ ಸಾಮಾಜಿಕ ಸಾಮರಸ್ಯ ಕದಡುವ ಹೇಳಿಕೆ ನೀಡಿದ ಸಂಸದ ಅನಂತಕುಮಾರ್ ಹೆಗಡೆ ಅವರನ್ನು ಕೂಡಲೇ ಬಂಧಿಸಿ ಕಾನೂನು ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಬುಧವಾರ ಬೃಹತ್ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಜಮಾವಣೆಗೊಂಡ ಮುಖಂಡರು, ಕಾರ್ಯಕರ್ತರು ಪಟ್ಟಣದ ಮುಖ್ಯ ರಸ್ತೆಯ ಮೂಲಕ ಪ್ರತಿಭಟನೆ ಮೆರವಣಿಗೆ ನಡೆಸಿ ಟಿಪ್ಪು ವೃತ್ತ, ಗಾಂಧಿ ವೃತ್ತದ ಮಾರ್ಗವಾಗಿ ತಹಸೀಲ್ದಾರ್ ಕಾರ್ಯಾಲಯ ತಲುಪಿ ಕೆಲಕಾಲ ಪ್ರತಿಭಟಿಸಿದರು.