ವೀರಶೈವ ಲಿಂಗಾಯತರ ಕಡೆಗಣಿಸಿದ್ದಕ್ಕೆ ಕಾಂಗ್ರೆಸ್ ಸೋಲು: ಮಾಜಿ ಸಚಿವ ಬಿ. ಶಿವರಾಂ
Jan 19 2024, 01:49 AM ISTಹಾಸನ ವೀರಶೈವ ಲಿಂಗಾಯತರನ್ನು ಕಡೆಗಣಿಸಿದಕ್ಕೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಸನ ಜಿಲ್ಲೆಯಲ್ಲಿ ಸೋಲು ಅನುಭವಿಸಬೇಕಾಯಿತು ಎಂದು ಮಾಜಿ ಸಚಿವ ಬಿ.ಶಿವರಾಂ ಹೇಳಿದ್ದಾರೆ. ಶಾಸಕ ಕೆ.ಎಂ. ಶಿವಲಿಂಗೇಗೌಡರಿಗೆ ನಿಗಮ ಮಂಡಳಿ ಸ್ಥಾನ ನೀಡುವುದಕ್ಕೆ ಶಿವರಾಂ ಪರೋಕ್ಷವಾಗಿ ಅಪಸ್ವರ ಎತ್ತಿದ್ದಾರೆ. ಹಾಸನದಲ್ಲಿ ಗುರುವಾರ ಮಾಧ್ಯಮದೊಂದಿಗೆ ಮಾತನಾಡಿದರು.