ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ಮಂಗಳವಾರ ಎಐಸಿಸಿ ಒಬಿಸಿ ಸಲಹಾ ಮಂಡಳಿಯ ಸದಸ್ಯರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಂಡಳಿಯ ಮೊದಲ ಸಭೆ ನಡೆಸಲಾಯಿತು.
ಮಹಾರಾಷ್ಟ್ರದ ಥಾಣೆ ನಗರದಲ್ಲಿ ನಿಷೇಧಿತ ಮಾದಕ ವಸ್ತು ಸಾಗಿಸುತ್ತಿದ್ದ ಕಲಬುರಗಿಯ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೇರಿ ಮೂವರನ್ನು ಬಂಧಿಸಲಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಘಟನೆ ಬೆನ್ನಲ್ಲೇ ಬಂಧಿತ ಮುಖಂಡನನ್ನು ಪಕ್ಷದಿಂದ ಉಚ್ಚಾಟನೆ ಸಹ ಮಾಡಲಾಗಿದೆ.
ಸ್ವಪಕ್ಷೀಯ ಶಾಸಕರೇ ದೂರುಗಳ ಸುರಿಮಳೆ ಸುರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸೋಮವಾರ ಸಚಿವರೊಂದಿಗೆ ದಿಢೀರ್ ‘ಒನ್ ಟು ಒನ್’ ಸಭೆ ಶುರು ಮಾಡಿದ್ದು, ಶಾಸಕರ ದೂರುಗಳ ಕುರಿತು ಸಚಿವರಿಂದ ವಿವರಣೆ ಪಡೆದಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದೆ. ಇದನ್ನು ಅರ್ಥ ಮಾಡಿಕೊಳ್ಳಬೇಕು. ವಿರೋಧ ಪಕ್ಷದವರು ಅಪಪ್ರಚಾರ ಮಾಡುತ್ತಿದ್ದಾರೆ. ಇಂತಹ ಸುಳ್ಳು, ಅಪಪ್ರಚಾರ, ಬಿಟ್ಟಿ ಕೆಲಸಗಳಲ್ಲಿ ಅವರು ನಿರತರಾಗಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು.