• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ ಅಭ್ಯರ್ಥಿಗಳ ಜಯ: ವಿಜಯೋತ್ಸವ

Nov 24 2024, 01:48 AM IST
ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ ರಾಜ್ಯದ ಮೂರು ವಿಧಾನಸಭಾ ಮತಕ್ಷೇತ್ರಗಳಿಗೆ ಜರುಗಿದ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಲಾಯಿತು. ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ಖಚಿತವಾಗುತ್ತಿದ್ದಂತೆ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಶಿವಾನಂದ ಪಾಟೀಲ ಪಟ್ಟಣದ ಆರಾದ್ಯದೈವ ಮೂಲನಂದೀಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.

ಚನ್ನರಾಯಪಟ್ಟಣದಲ್ಲಿ ಕಾಂಗ್ರೆಸ್‌ ಗೆಲುವಿನ ಸಂಭ್ರಮ

Nov 24 2024, 01:48 AM IST
ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದ ಹಿನ್ನೆಲೆಯಲ್ಲಿ ಶನಿವಾರ ಪಟ್ಟಣದ ಕೆ. ಆರ್‌. ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ರಾಜ್ಯದಲ್ಲಿ ಐದು ಗ್ಯಾರಂಟಿ ಯೋಜನೆಗಳು ಸೂಕ್ತವಾಗಿ ಬಡವರು ದೀನದಲಿತರು ಶೋಷಿತ ಸಮುದಾಯಕ್ಕೆ ಪ್ರಾಮಾಣಿಕವಾಗಿ ತಲುಪಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನ ಮೂರೂ ಕ್ಷೇತ್ರದಲ್ಲೂ ಸಹ ಜನ ಕೈ ಹಿಡಿದಿದ್ದಾರೆ ಕಾಂಗ್ರೆಸ್ ಎಂದಿಗೂ ಜನರ ಪರವಾಗಿ ಕೆಲಸ ಮಾಡುತ್ತದೆ ಹೊರತು ಅಪಪ್ರಚಾರ ಮಾಡುವುದಿಲ್ಲ ಎಂದರು.

ಕಾಂಗ್ರೆಸ್‌ ಗೆಲುವಿಗೆ ಗ್ಯಾರಂಟಿಗಳೇ ಕಾರಣ

Nov 24 2024, 01:47 AM IST
ಸರ್ಕಾರದ ಅಭಿವೃದ್ಧಿ ಕೆಲಸಗಳು ಹಾಗೂ ಗ್ಯಾರಂಟಿ ಯೋಜನೆಗಳ ಜತೆಗೆ ಸಿಎಂ-ಡಿಸಿಎಂ ಜೋಡಿ ಒಂದಾಗಿ ಮಾಡಿದ ತಂತ್ರಗಾರಿಕೆಯಿಂದ ಈ ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಪಡೆದಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು ಹೇಳಿಕೆ ನೀಡಿದ್ದಾರೆ. ಫಲಿತಾಂಶ ನಮ್ಮ ವಿರುದ್ಧ ಬಂದಿದ್ದರೆ ಜನ ನಮ್ಮ ಪರವಾಗಿದ್ದಾರೆ ಎಂದು ಹೇಳಲು ಆಗುತ್ತಿರಲಿಲ್ಲ. ಈಗ ಬಂದಿರುವ ಫಲಿತಾಂಶ ಇಡೀ ರಾಜ್ಯದ ಜನರ ಅಭಿಪ್ರಾಯ ಎಂದರು.

ಕಾಂಗ್ರೆಸ್‌ ಗೆಲುವಿನಿಂದ ಬಿಜೆಪಿ ದೂಳಿಪಟ: ಸೋಮಶೇಖರ್

Nov 24 2024, 01:47 AM IST
ಆನಂದಪುರ ಬಸ್ ನಿಲ್ದಾಣದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ವಿಜಯೋತ್ಸವವನ್ನು ಆಚರಿಸಿದರು.

ಉಪಚುನಾವಣೆಯಲ್ಲಿ ಗೆಲುವು: ಕಾಂಗ್ರೆಸ್‌ ಕಾರ್ಯಕರ್ತರಿಂದ ವಿಜಯೋತ್ಸವ

Nov 24 2024, 01:47 AM IST
ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ‌ಯಾಸಿರ್ ಪಠಾಣ್ ಗೆಲುವು ಸಾಧಿಸಿದ ಹಿನ್ನೆಲೆ ಶನಿವಾರ ಬೆಳಗಾವಿ ‌ನಗರದ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಹಾಗೂ ಲೋಕೊಪಯೋಗಿ ಸಚಿವ ಸತೀಶ ಜಾರಕಿಹೊಳಿ ಆಗಮಿಸುತ್ತಿದ್ದಂತೆ ಕಾಂಗ್ರೆಸ್‌ ಕಾರ್ಯಕರ್ತರು ಸಿಹಿ ತಿನ್ನಿಸಿ ಪಟಾಕಿ ಸಿಡಿಸಿ, ಪುಷ್ಪಾರ್ಚನೆ ಮಾಡಿ ಮುಂದಿನ ಮುಖ್ಯಮಂತ್ರಿ ಸತೀಶ ಜಾರಕಿಹೊಳಿ ಎಂದು ಘೋಷಣೆ ಕೂಗಿದರು.

ಮೂಲ್ಕಿ, ಹಳೆಯಂಗಡಿ ಕಾಂಗ್ರೆಸ್‌ ವಿಜಯೋತ್ಸವ

Nov 24 2024, 01:47 AM IST
ರಾಜ್ಯದ ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ ಜಯಸಾಧಿಸಿದ್ದು ಮೂಲ್ಕಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ವಿಜಯೋತ್ಸವ ಹಳೆಯಂಗಡಿ ಜಂಕ್ಷನ್ ಬಳಿ ನಡೆಯಿತು.

ಬೈ ಎಲೆಕ್ಷನ್‌ನಲ್ಲಿ ಗೆಲುವು: ಜಿಲ್ಲೆಯಾದ್ಯಂತ ಕಾಂಗ್ರೆಸ್‌ ವಿಜಯೋತ್ಸವ

Nov 24 2024, 01:47 AM IST
ಚಿಕ್ಕಮಗಳೂರು, ಶಿಗ್ಗಾಂವಿ, ಚನ್ನಪಟ್ಟಣ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಜಯಭೇರಿ ಬಾರಿಸಿದ್ದು, ಈ ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ತಾಲೂಕು ಕೇಂದ್ರಗಳಲ್ಲಿ ಶಾಸಕರ ಹಾಗೂ ಪಕ್ಷದ ಮುಖಂಡರ ನೇತೃತ್ವದಲ್ಲಿ ಶನಿವಾರ ವಿಜಯೋತ್ಸವ ಆಚರಿಸಲಾಯಿತು.

ಉಪಚುನಾವಣೆ ಗೆಲುವು ಸಂಭ್ರಮಿಸಿದ ಕಾಂಗ್ರೆಸ್‌

Nov 24 2024, 01:46 AM IST
ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ಭವನದ ಮುಂದೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಶನಿವಾರ ಪಟಾಕಿ ಸಿಡಿಸಿ, ಸಿಹಿ ಹಂಚುವುದರ ಮೂಲಕ ಸಂಭ್ರಮಾಚರಣೆ ನಡೆಸಿದರು. ಸುಳ್ಳು, ಅಪಪ್ರಚಾರ, ಕುಟುಂಬ ರಾಜಕಾರಣಕ್ಕೆ ಮತ್ತು ಉದ್ದೇಶ ಪೂರ್ವಕವಾಗಿ ಟೀಕೆ ಟಿಪ್ಪಣಿ ಮಾಡಿರುವ ವ್ಯಕ್ತಿಗಳಿಗೆ ಅದರಲ್ಲೂ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮುಖಂಡರಿಗೆ ಸ್ಪಷ್ಟ ಸಂದೇಶವನ್ನು ಮತದಾರರು ಕೊಟ್ಟಿದ್ದಾರೆ. ಈ ಮೂರು ಕ್ಷೇತ್ರಗಳ ಜನರಿಗೆ ಮತ್ತೊಮ್ಮೆ ಧನ್ಯವಾದಗಳನ್ನು ಹೇಳುವುದಾಗಿ ತಿಳಿಸಿದರು.

13 ರಾಜ್ಯಗಳ 48 ಕ್ಷೇತ್ರಗಳಿಗೆ ನಡೆದ ಉಪಚುನಾವಣೆ : ಬಿಜೆಪಿಗೆ 20ರಲ್ಲಿ, ಕಾಂಗ್ರೆಸ್‌ 7 ಜಯ

Nov 24 2024, 01:46 AM IST
ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳು ಸೇರಿದಂತೆ 13 ರಾಜ್ಯಗಳ 48 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ 20, ಕಾಂಗ್ರೆಸ್‌ 7, ತೃಣಮೂಲ ಕಾಂಗ್ರೆಸ್‌(ಟಿಎಂಸಿ) 6, ಸಮಾಜವಾದಿ ಪಕ್ಷ (ಎಸ್‌ಪಿ) 3 ಹಾಗೂ ಆಪ್‌ 3 ಕ್ಷೇತ್ರಗಳಲ್ಲಿ ಜಯ ಸಾಧಿಸಿದೆ.

ಬೊಮ್ಮಾಯಿ ಕಮಲ ಕೋಟೆ ಭೇದಿಸಿ ಬಾವುಟ ಹಾರಿಸಿದ ಕಾಂಗ್ರೆಸ್‌

Nov 24 2024, 01:46 AM IST
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಭರತ ಬೊಮ್ಮಾಯಿ ಅವರನ್ನು ಮಣಿಸಿ ಕಾಂಗ್ರೆಸ್‌ನ ಯಾಸೀರ್‌ ಅಹ್ಮದ್ ಖಾನ್ ಪಠಾಣ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸತತ ನಾಲ್ಕು ಸಲ ಗೆದ್ದು ಬಿಜೆಪಿ ಭದ್ರಕೋಟೆ ಎನಿಸಿದ್ದ ಶಿಗ್ಗಾಂವಿ ಕ್ಷೇತ್ರ ಈಗ ಕಾಂಗ್ರೆಸ್‌ ಪಾಲಾಗಿದೆ.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • ...
  • 168
  • next >

More Trending News

Top Stories
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved