ಕಾಂಗ್ರೆಸ್ ಎಫ್ಎಸ್ಎಲ್ ವರದಿ ಒಪ್ಪುವ ಸ್ಥಿತಿಯಲ್ಲಿಲ್ಲ!: ಕೋಟ ಶ್ರೀನಿವಾಸ ಪೂಜಾರಿ
Mar 04 2024, 01:18 AM ISTರಾಮೇಶ್ವರಂ ಕೆಫೆಯ ಸ್ಫೋಟ ಪ್ರಕರಣದ ಆರೋಪಿಗೆ ಬಂಧಿಸುವ ಬದಲು, ಕಾಂಗ್ರೆಸ್ ಪಕ್ಷದ ಅಧಿಕಾರಸ್ಥರು ಕೇವಲ ಹೇಳಿಕೆಗಳ ನೀಡುತ್ತಿದ್ದಾರೆ. ನಾಡಿನ 7 ಕೋಟಿ ಜನರ ಹೃದಯವಾದ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆ. ಇದರಿಂದ ಇಡೀ ರಾಜ್ಯದ ಜನತೆಗೆ ನೋವುಂಟಾಗಿದೆ. ಇತಿಹಾಸದಲ್ಲಿ ಆಗದಿರುವ ಕೃತ್ಯವು ವಿಧಾನಸೌಧದಲ್ಲಾಗಿದೆ. ವಿಧಿವಿಜ್ಞಾನ ಕೇಂದ್ರ (ಎಫ್ಎಸ್ಎಲ್) ದಿಂದ ಮಾಹಿತಿ ಬಂದರೂ ಅದನ್ನು ಒಪ್ಪಿಕೊಳ್ಳುವ ಮನಸ್ಥಿತಿಯಲ್ಲಿ ಕಾಂಗ್ರೆಸ್ಸಿಗರು ಇಲ್ಲ.