ವಿಷಕಾರಿ ಕಂಪನಿಗಳ ವಿರುದ್ಧ ಕಾನೂನು ಹೋರಾಟ
Sep 01 2025, 01:03 AM ISTಜಿಲ್ಲೆಯ ಕಡೇಚೂರು ಕೈಗಾರಿಕಾ ಪ್ರದೇಶದಲ್ಲಿನ ಕೆಮಿಕಲ್ ಕಂಪನಿಗಳ ಪೈಕಿ, ಅನೇಕವು ಸರ್ಕಾರದ ನಿಯಮಗಳನ್ನು ಪಾಲಿಸುತ್ತಿಲ್ಲ. ಅಪಾಯಕಾರಿ ರಾಸಾಯನಿಕ -ತ್ಯಾಜ್ಯ ವೈಜ್ಞಾನಿಕವಾಗಿ ವಿಲೇವಾರಿ ಮಾಡದಿರುವುದರಿಂದ, ಪರಿಸರ-ಜಲ ಹದಗೆಟ್ಟು ಈ ಭಾಗದ ಜೀವ ಸಂಕುಲಕ್ಕೆ ಆಪತ್ತು ಕಾದಿದೆ. ಕ್ರಮ ಕೈಗೊಳ್ಳಬೇಕಾದ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ, ವಿಷಕಾರಿ ಕಂಪನಿಗಳಿಗೆ ಮತ್ತೇ ಪರವಾನಗಿ ಕೊಡುತ್ತಿರುವುದು ಆತಂಕ ಮೂಡಿಸಿದೆ ಎಂದು ದೂರಿ " ಕಂಪನಿ ಹಠಾವೋ, ಕಡೇಚೂರು ಬಚಾವೋ " ಮತ್ತು ಬಳ್ಳಾರಿ ಜಿಲ್ಲೆ ಸಂಡೂರಿನ ಜನಸಂಗ್ರಾಮ ಪರಿಷತ್ ಹೋರಾಟ ಸಮಿತಿ ಜಂಟಿಯಾಗಿ ಕಾನೂನು ಸಮರಕ್ಕೆ ಮುಂದಾಗಿದೆ.