ಕಾನೂನು ರಕ್ಷಣೆ ಪ್ರತಿಯೊಬ್ಬರ ಹಕ್ಕು:ನ್ಯಾಯಾಧೀಶ ಎಚ್. ಮಹದೇವಪ್ಪ
Dec 13 2023, 01:00 AM ISTಸಮಾನತೆ, ಸಮಾನ ಕಾನೂನು ರಕ್ಷಣೆ, ಶೋಷಣೆ ರಹಿತ ಆರೋಗ್ಯ ಪಡೆಯುವುದು ಪ್ರತಿಯೊಬ್ಬರ ಹಕ್ಕಾಗಿದೆ ಎಂದು ಅಪರ ಹಿರಿಯ ಸಿವಿಲ್ ನ್ಯಾಯಾಧೀಶ ಎಚ್. ಮಹದೇವಪ್ಪ ಹೇಳಿದರು.ಪಟ್ಟಣದ ಜ್ಯೋತಿನಿವಾಸ್ ಶಾಲೆಯಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಆಡಳಿತ, ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಕಾನೂನು ಅರಿವು ಕಾರ್ಯಕ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.