ಸಾಲ ವಸೂಲಾತಿಗೆ ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ
Feb 19 2025, 12:46 AM ISTರಾಮನಗರ: ಸಾಲ ವಸೂಲಾತಿ ಸಂದರ್ಭಗಳಲ್ಲಿ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ ಕಿರುಕುಳ ಹಾಗೂ ಬಲವಂತದ ಕ್ರಮಗಳಿಂದ ಆಗುತ್ತಿರುವ ಅನಾಹುತ, ದುರ್ಘಟನೆ ನಿಯಂತ್ರಿಸಲು ಜಾರಿಗೊಂಡಿರುವ ಮೈಕ್ರೋ ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶ-2025 ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಇದನ್ನು ಉಲ್ಲಂಘಿಸಿದಲ್ಲಿ ಜಿಲ್ಲಾಡಳಿತ ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಎಚ್ಚರಿಕೆ ನೀಡಿದರು