ಸುಪ್ರೀಂಕೋರ್ಟ್ನ ನ್ಯಾಯಾಧೀಶರ ಗ್ರಂಥಾಲಯದಲ್ಲಿ ನ್ಯಾಯದೇವತೆ ನೂತನ ಮೂರ್ತಿಯೊಂದನ್ನು ಅಳವಡಿಸಲಾಗಿದ್ದು, ಅದೀಗ ಎಲ್ಲರ ಗಮನ ಸೆಳೆಯುತ್ತಿದೆ. ಕಾರಣ, ಈ ನ್ಯಾಯದೇವತೆಯ ಕಣ್ಣಿಗೆ ಕಟ್ಟಿದ್ದ ಬಟ್ಟೆಯನ್ನು ಬಿಚ್ಚಲಾಗಿದ್ದು, ಆಕೆ ಕೈಯ್ಯಲ್ಲಿದ್ದ ಖಡ್ಗದ ಬದಲು ಸಂವಿಧಾನ ಕೊಡಲಾಗಿದೆ.