• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಿರುಪತಿ ತಿರುಮಲ ಆವರಣದಲ್ಲಿ ರಾಜಕೀಯ ಹೇಳಿಕೆ ನೀಡಿದರೆ ಕಾನೂನು ಕ್ರಮ! ಟಿಟಿಡಿ ನಿರ್ಬಂಧ

Dec 01 2024, 01:35 AM IST

 ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ರಾಜಕೀಯ ಹೇಳಿಕೆಗಳನ್ನು ನೀಡುವುದಕ್ಕೆ ತಿರುಮಲ ತಿರುಪತಿ ದೇವಸ್ಥಾನಮ್‌(ಟಿಟಿಡಿ) ನಿರ್ಬಂಧ ವಿಧಿಸಿದೆ.

ಶ್ರೇಷ್ಠ ಸಂವಿಧಾನಕ್ಕೆ ಅಗೌರವ ತಂದ ಶ್ರೀಗಳ ವಿರುದ್ಧ ಕಾನೂನು ಕ್ರಮವಾಗಲಿ

Dec 01 2024, 01:35 AM IST
ನಮ್ಮನ್ನು ಗೌರವಿಸುವ ಸಂವಿಧಾನ ಬರಲಿ ಎಂದು ಹೇಳಿಕೆ ನೀಡುವ ಮೂಲಕ ಈಗಿರುವ ಶ್ರೇಷ್ಠ ಸಂವಿಧಾನಕ್ಕೆ ಅಗೌರವ ಸೂಚಿಸಿರುವ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಶ್ರೀಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ.ಕೃಷ್ಣಪ್ಪ ಸ್ಥಾಪಿತ) ತಾಲೂಕು ಸಂಚಾಲಕ ಪಿ.ಜೆ. ಮಹಾಂತೇಶ್ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಹಿಮ್ಸ್ ಆವರಣದಲ್ಲಿ ರಾಜ್ಯಮಟ್ಟದ ಕಾನೂನು ಅರಿವು

Nov 30 2024, 12:49 AM IST
ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಹಿಮ್ಸ್) ಆವರಣದಲ್ಲಿ ಇಂದು (ನ.೩೦) ಬೆಳಿಗ್ಗೆ ೧೦ ಗಂಟೆಗೆ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆಯ ವಿವಿಧ ವೃಂದದ ಹೊರಗುತ್ತಿಗೆ ನೌಕರರ ಸಂಘದ ವತಿಯಿಂದ ರಾಜ್ಯಮಟ್ಟದ ಆರೋಗ್ಯ ಇಲಾಖೆಯ ಹೊರಗುತ್ತಿಗೆ ನೌಕರರಿಗೆ ಕಾನೂನು ಅರಿವು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಅಕ್ಷಯ್ ಡಿ.ಎಂ. ಗೌಡ ತಿಳಿಸಿದರು. ಎಲ್ಲಾ ಇಲಾಖೆಗಳಲ್ಲಿಯೂ ಹೊರಗುತ್ತಿಗೆ ನೌಕರರೆಂದರೆ ನಿರ್ಲಕ್ಷ್ಯತೋರುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಕನಿಷ್ಠ ಮೂಲಭೂತ ಸೌಕರ್ಯಗಳನ್ನು ನೀಡದೆ ಇರುವುದು ವಿಪರ್ಯಾಸ. ಹೀಗಾಗಿ ಸಂಘಟನೆ ಮೂಲಕ ನಮ್ಮ ಹಕ್ಕೊತ್ತಾಯಗಳನ್ನು ಸರ್ಕಾರದ ಮುಂದಿಡಲು ಮುಂದಾಗಿದ್ದೇವೆ ಎಂದರು.

ಜನಸಾಮಾನ್ಯರಿಗೆ ಕಾನೂನು ಅರಿವು, ನೆರವು ಕಲ್ಪಿಸಿ: ಹೊಸಮನಿ ಪುಂಡಲೀಕ

Nov 30 2024, 12:46 AM IST
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ವಕೀಲರ ಸಂಘ ಆಶ್ರಯದಲ್ಲಿ ಶುಕ್ರವಾರ ನಗರದ ಜಿಲ್ಲಾ ನ್ಯಾಯಾಲಯದಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಕಾನೂನು ಅರಿವು ಮತ್ತು ತರಬೇತಿ ಕಾರ್ಯಕ್ರಮ ಸಂಪನ್ನಗೊಂಡಿತು.

ತ್ವರಿತಗತಿ ನ್ಯಾಯದಾನಕ್ಕಾಗಿ ಅಗತ್ಯ ಕಾನೂನು ತಿದ್ದುಪಡಿ ಚಿಂತನೆ: ಸಚಿವ ಎಚ್‌.ಕೆ. ಪಾಟೀಲ

Nov 30 2024, 12:45 AM IST
ರಾಜ್ಯ ಸರ್ಕಾರ ಸಿವಿಲ್‌ ಪ್ರೊಸಿಷರ್‌ ಕೋಡ್‌ಗೆ ತಿದ್ದುಪಡಿ ತಂದು ಸಾಮಾನ್ಯ ಜನರ ಪ್ರಕರಣಗಳನ್ನು ತ್ವರಿತಗತಿಯಲ್ಲಿ ಇತ್ಯರ್ಥಗೊಳಿಸುವ ಕಾನೂನಿನಗೆ ರಾಷ್ಟ್ರಪತಿಗಳಿಂದ ಅಂಕಿತ ಪಡೆದು ಅನುಷ್ಠಾನಗೊಳಿಸಲಾಗುವುದು ಎಂದು ಸಚಿವ ಎಚ್‌.ಕೆ. ಪಾಟೀಲ ಭರವಸೆ ನೀಡಿದರು.

ಇಂದು ಕಾನೂನು ವಿವಿ 6ನೇ ಘಟಿಕೋತ್ಸವ

Nov 29 2024, 01:03 AM IST
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವ ನ. 29ರ ಬೆಳಗ್ಗೆ 11ಕ್ಕೆ ಕೃಷಿ ವಿಶ್ವವಿದ್ಯಾಲಯದ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ನಡೆಯಲಿದ್ದು, ನಿವೃತ್ತ ಮುಖ್ಯ ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯ್ಲಿ, ನ್ಯಾಯಮೂರ್ತಿ ಅಶೋಕ ಬಿ. ಹಿಂಚಗೇರಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ.

ಕಾನೂನು ಬದ್ಧ ಮಕ್ಕಳ ದತ್ತು ಪಡೆಯಿರಿ: ಶರಣಪ್ಪ

Nov 29 2024, 01:03 AM IST
ಮಕ್ಕಳ ಹಕ್ಕುಗಳ ರಕ್ಷಣೆ ಬಗ್ಗೆ ಎಲ್ಲರೂ ಅರಿತುಕೊಳ್ಳಬೇಕು.

ಸಂವಿಧಾನ ದೇಶದ ಮೂಲಭೂತ ಕಾನೂನು: ವಕೀಲ ಕೆ.ಆರ್.ಸುರೇಶ್

Nov 28 2024, 12:36 AM IST
ಶೃಂಗೇರಿ, ನಮ್ಮ ಸಂವಿಧಾನ ನಮ್ಮೆಲ್ಲರನ್ನು ರಕ್ಷಿಸುವ ಬಹುದೊಡ್ಡ ಕಾನೂನು. ದೇಶದಲ್ಲಿ ಸಂವಿಧಾನ ಜಾರಿಗೆ ಬಂದ ನಂತರ ಹೊಸ ಶಕೆ ಆರಂಭಗೊಂಡಿತು. ಸಂವಿಧಾನ ದೇಶದ ಮೂಲಭೂತ ಕಾನೂನು ಎಂದು ವಕೀಲ ಕೆ.ಆರ್.ಸುರೇಶ್ ಹೇಳಿದರು.

ವಕ್ಫ್ ತಿದ್ದುಪಡಿಯಾದರೆ ಕಾನೂನು ಸುವ್ಯವಸ್ಥೆ ಕಾಪಾಡಲು ಮುಂಜಾಗ್ರತೆ ವಹಿಸಿ

Nov 28 2024, 12:31 AM IST
ವಕ್ಫ್ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಏನಾದರೂ ಸ್ವೀಕಾರಗೊಂಡರೆ ಮುಂದೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಬಹುದು. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಮುಂಜಾಗ್ರತೆ ವಹಿಸುವಂತೆ ಆಗ್ರಹಿಸಿ ಶ್ರೀರಾಮಸೇನೆಯಿಂದ ಬುಧವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೀತಾ ಅವರಿಗೆ ಮನವಿ ಸಲ್ಲಿಸಿದರು. ತಾವು ಜಿಲ್ಲೆಯಾದ್ಯಂತ ತಕ್ಷಣ ಕಾನೂನು ಸುವ್ಯವಸ್ಥೆ ಬಿಗಿಗೊಳಿಸಿ ಪ್ರಚೋದನೆ ನೀಡುವವರನ್ನು, ಸಮಾಜ ಘಾತುಕರನ್ನು ಬಂಧಿಸಿ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಲು ಮನವಿ ಸಲ್ಲಿಸಿದರು.

ಕಾನೂನು ವಿದ್ಯಾರ್ಥಿಗಳು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯಬೇಕು

Nov 27 2024, 01:06 AM IST
ಭಾರತದ ಸಂವಿಧಾನವು ವಿಶ್ವದ ಅತ್ಯಂತ ಸುದೀರ್ಘವಾದ ಲಿಖಿತ ಸಂವಿಧಾನವಾಗಿದೆ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 57
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved