ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ, ದಂಡ
Sep 07 2024, 01:40 AM ISTಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಕುಂಟೋಜಿ ಬಳಿ ಭೀಕರ ಬೈಕ್ ಅಪಘಾತದಲ್ಲಿ ಮೂವರು ಸಾವನ್ನಪ್ಪಿ, ನಾಲ್ವರು ಗಂಭೀರ ಗಾಯಗೊಂಡಿರುವ ಸ್ಥಳಕ್ಕೆ ಎಸ್ಪಿ ಋಷಿಕೇಶ ಸೋನಾವಣೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇತ್ತೀಚೆಗೆ ನಗರ, ಪಟ್ಟಣ, ಗ್ರಾಮೀಣ ರಸ್ತೆಗಳ ಮೇಲೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು.