ವ್ಹಿಪ್ ಉಲ್ಲಂಘಿಸಿದ ಜೆಡಿಎಸ್ ಸದಸ್ಯರ ವಿರುದ್ಧ ಕಾನೂನು ಹೋರಾಟ
Aug 24 2024, 01:16 AM ISTಜೆಡಿಎಸ್ ಪಕ್ಷದ ಚಿಹ್ನೆ ಅಡಿಯಲ್ಲಿ ಸದಸ್ಯರಾಗಿ ಗುರುತಿಸಿಕೊಂಡಿದ್ದ ನಗರಸಭೆ ಸದಸ್ಯರು ವಿಪ್ ಉಲ್ಲಂಘನೆ ಮಾಡಿ ಪರ್ಯಾಯವಾಗಿ ಮತ ಚಲಾವಣೆ ಮಾಡಿದ್ದಾರೆ. ಅರಸೀಕೆರೆ ನಗರಸಭೆಯಲ್ಲಿ ಜೆಡಿಎಸ್ ಚಿಹ್ನೆಯಿಂದ ೧೫ ಜನರು ಗೆಲುವು ಪಡೆದಿದ್ದು, ನಮ್ಮ ಜೊತೆ ಉಳಿದವರು ಕೇವಲ ಇಬ್ಬರು ಮಾತ್ರ. ಅರಸೀಕೆರೆಯಲ್ಲಿ ನಡೆದ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಸದಸ್ಯರು ವಿಪ್ ಉಲ್ಲಂಘನೆ ಮಾಡಲಾಗಿದ್ದು, ಅವರ ವಿರುದ್ಧ ಕಾನೂನು ಹೋರಾಟ ಮಾಡುವುದಾಗಿ ಜೆಡಿಎಸ್ ಪಕ್ಷದ ಮುಖಂಡರಾದ ಎನ್.ಆರ್ ಸಂತೋಷ್ ಎಚ್ಚರಿಸಿದರು.