ಅನಧಿಕೃತ ಕಟ್ಟಡ ಕಾನೂನು ವ್ಯಾಪ್ತಿಯಲ್ಲಿ ಸಕ್ರಮಕ್ಕೆ ಸೂಚನೆ
Dec 24 2023, 01:45 AM ISTಹತ್ತು ಹಲವು ವರ್ಷಗಳ ಹಿಂದೆಯೇ ಕಟ್ಟಡ, ಮನೆಗಳನ್ನು ನಿರ್ಮಿಸಿಕೊಂಡಿದ್ದರೂ ಕೂಡ ಅಂಥ ಕುಟುಂಬಗಳಿಗೆ ಇದುವರೆಗೂ ಹಕ್ಕುಪತ್ರ ನೀಡಲಾಗಿಲ್ಲ. ಹಕ್ಕುಪತ್ರ ನೀಡಿ, ಮನೆಗಳನ್ನು ಸಕ್ರಮಗೊಳಿಸಲು ಕಾನೂನಿನಲ್ಲಿ ಅವಕಾಶ ಇದ್ದರೂ ಸಹ ಈ ಕುರಿತು ಇದುವರೆಗೂ ಯಾರೊಬ್ಬರೂ ಗಮನ ಹರಿಸಿಲ್ಲ. ಇದರಿಂದಾಗಿ ತಾಲೂಕಿನಲ್ಲಿ ಸಾವಿರಾರು ಕುಟುಂಬಗಳು ಅತಂತ್ರ ಸ್ಥಿತಿಯಲ್ಲಿವೆ. ಕೂಡಲೇ ಎಲ್ಲ ಪಿಡಿಒಗಳೊಂದಿಗೆ ಸಭೆ ನಡೆಸಿ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇರುವ ಅನಧಿಕೃತ ಮನೆಗಳ ಬಗೆಗೆ ಸ್ಪಷ್ಟ ಮಾಹಿತಿ ಸಂಗ್ರಹಿಸಿ ಎಂದು ತಹಸೀಲ್ದಾರ್ ರೇಣುಕವ್ವಗೆ ಶ್ರೀನಿವಾಸ ಮಾನೆ ಸೂಚಿಸಿದರು.