ರಾಜ್ಯದಲ್ಲಿ ಕೋಟ್ಯಾಂತರ ರು. ಅಭಿವೃದ್ಧಿ ಕಾಮಗಾರಿ ಚಾಲ್ತಿ: ಸಚಿವ ರಾಮಲಿಂಗಾರೆಡ್ಡಿ
Oct 31 2024, 01:05 AM ISTರಾಜ್ಯಾದ್ಯಂತ ಹಲವು ಕಡೆ ಹೊಸ ಆರ್ ಟಿಒ ಕಚೇರಿಗಳ ಕಟ್ಟಡ ಕಾಮಗಾರಿಗಳು ನಡೆಯುತ್ತಿರುವುದರ ಜೊತೆಗೆ ಚಾಲನಾ ತರಬೇತಿ ಟ್ರ್ಯಾಕ್‌ಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಇಲ್ಲಿಯೂ ಚಾಲನಾ ತರಬೇತಿ ಟ್ರ್ಯಾಕ್ ನಿರ್ಮಿಸಲು ಸಚಿವ ಡಾ.ಎಂ.ಸಿ.ಸುಧಾಕರ್ ೩.೫ ಎಕರೆ ಜಮೀನು ಗುರುತಿಸಿದ್ದು, ಟ್ರ್ಯಾಕ್ ಕಾಮಗಾರಿ ಪ್ರಗತಿಯಲ್ಲಿದೆ. ತಾಲೂಕಿಗೆ ಅವಶ್ಯಕವಿರುವ ಬಸ್‌ಗಳ ವ್ಯವಸ್ಥೆಗಳನ್ನು ಮಾಡಿಕೊಡಲಾಗುವುದು.