ಕಾಮಗಾರಿ ಚುರುಕುಗೊಳಿಸಲು ಡೀಸಿ ಸೂಚನೆ
Jan 04 2025, 12:31 AM ISTರಾಷ್ಟ್ರೀಯ ಹೆದ್ದಾರಿ ೭೫ ರಲ್ಲಿ ಮಳೆಗಾಲದ ಸಮಯದಲ್ಲಿ ಯಾವುದೇ ಸಮಸ್ಯೆ ಉಂಟಾಗದಂತೆ ಸರ್ಕಾರದ ಮಾರ್ಗಸೂಚಿಯಂತೆ ಕಾಮಗಾರಿಯನ್ನು ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಸತ್ಯಭಾಮ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ವಿಪತ್ತು ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಭೂ ಕುಸಿತ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮ ವಹಿಸಿ ಕಾಮಗಾರಿ ಪೂರ್ಣಗೊಳಿಸಲು ತಿಳಿಸಿದರು.