ಹಳ್ಳಿಗಳಲ್ಲಿನ ಕಾಮಗಾರಿ ಪರಿಶೀಲಿಸಿದ ಸಿಇಒ ರಿಷಿ
Jul 07 2025, 11:48 PM ISTಕನ್ನಡಪ್ರಭ ವಾರ್ತೆ ವಿಜಯಪುರ ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾಮ ಪಂಚಾಯತಿಗೆ ಸಿಇಒ ರಿಷಿ ಆನಂದ ಭೇಟಿ ನೀಡಿ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದರು. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನಿರ್ಮಾಣವಾದ ಎನ್.ಆರ್.ಎಲ್.ಎಂ ಸಂಜೀವಿನಿ ಶೆಡ್ ಕಟ್ಟಡ ಹಾಗೂ ನೂತನ ಗ್ರಾಮ ಪಂಚಾಯಿತಿ ಕಟ್ಟಡಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಇದೇ ವೇಳೆ ನೂತನವಾಗಿ ನಿರ್ಮಾಣವಾಗುತ್ತಿರುವ ಗ್ರಂಥಾಲಯ ಕಟ್ಟಡಕ್ಕೆ ವೀಕ್ಷಿಸಿದ ಅವರು ಕಟ್ಟಡ ನಿರ್ಮಾಣದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ಗ್ರಂಥಾಲಯ ಪೂರ್ಣಗೊಂಡ ತಕ್ಷಣವೇ ಎಲ್ಲ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡುವಂತೆ ತಿಳಿಸಿದರು.