ಜೂನ್ 30ರೊಳಗೆ ಎತ್ತಿನಹೊಳೆ ಕಾಮಗಾರಿ ಪೂರ್ಣ: ವಿಶ್ವೇಶ್ವರಯ್ಯ ಜಲ ನಿಗಮದ ಸಣ್ಣಚಿತ್ತಯ್ಯ
May 27 2024, 01:08 AM ISTವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದಿಂದ ಎತ್ತಿನಹೊಳೆ ಕಾಮಗಾರಿಯ ಕೆಲಸಗಳು ಜೂನ್ 30 ರೊಳಗೆ ಪೂರ್ಣಗೊಳ್ಳಲಿದ್ದು, ಯೋಜನೆಗೆ ಚಾಲನೆ ನೀಡುವ ದಿನಾಂಕವನ್ನು ಸರ್ಕಾರ ನಿಗದಿ ಮಾಡಲಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಣ್ಣಚಿತ್ತಯ್ಯ ತಿಳಿಸಿದರು. ಸಕಲೇಶಪುರದ ವಿವಿಧ ವಿಯರ್‌ಗಳಲ್ಲಿ ಶನಿವಾರ ಎತ್ತಿನಹೊಳೆ ಯೋಜನೆ ಕಾಮಗಾರಿ ಪ್ರಗತಿಯನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಾರ್ಯದರ್ಶಿ ವಿಶ್ವನಾಥ್ ರೆಡ್ಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದರು.