ಕಳಪೆ ಕಾಮಗಾರಿ ಎನ್ನುವ ಬಿಜೆಪಿಗರಿಗೆ ತಿರುಗೇಟು
Aug 13 2024, 12:56 AM ISTಕನ್ನಡಪ್ರಭ ವಾರ್ತೆ ಲೋಕಾಪುರ ಪಟ್ಟಣದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳಿಗೆ ಬಿಜೆಪಿ ಮುಖಂಡರು ಕಳಪೆ ಕಾಮಗಾರಿ ಎಂದು ಹೇಳುತ್ತಿರುವುದು ಎಷ್ಟು ಸಮಂಜಸ ಎಂದು ಬಿಡಿಡಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷ ಶಿವಾನಂದ ಉದಪುಡಿ ಪ್ರಶ್ನಿಸಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಅಧಿಕಾರ ಅವಧಿಯಲ್ಲಿ ಲೋಕಾಪುರ ಪಟ್ಟಣದಲ್ಲಿ ವಾಣಿಜ್ಯ ಮಳಿಗೆಗಳಿಗೆ ವಿದ್ಯುತ್ ಸಂಪರ್ಕ ಇಲ್ಲದೇ ತರಾತುರಿಯಲ್ಲಿ ಉದ್ಘಾಟಿಸಲಾಯಿತು.