ಕಾರ್ಮಿಕ ಸಂಘಟನೆ ಜಂಟಿ ಸಮಿತಿಯಿಂದ ಪ್ರತಿಭಟನೆ
Feb 17 2024, 01:17 AM ISTಕೇಂದ್ರ ಬಿಜೆಪಿ ಸರ್ಕಾರದ ಜನ, ಕಾರ್ಮಿಕ, ರೈತ ವಿರೋಧಿ ನೀತಿ ಖಂಡಿಸಿ ಮತ್ತು ಸ್ವಾತಂತ್ರ, ಪ್ರಜಾಪ್ರಭುತ್ವ ಸಾಮಾಜಿಕ ನ್ಯಾಯ, ಒಕ್ಕೂಟ ರಚನೆ ಮುಂತಾದವುಗಳ ಮೇಲಿನ ಆಕ್ರಮಣ ವಿರೋಧಿಸುತ್ತದೆ ಹಾಗೂ ಧರ್ಮ ನಿರಪೇಕ್ಷ ಪ್ರಜಾಪ್ರಭತ್ವ, ಗಣತಂತ್ರದ ಸಂವಿಧಾನ ರಕ್ಷಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಲು ಆಗ್ರಹಿಸಿ ಸಂಯುಕ್ತ ಹೋರಾಟ-ಕರ್ನಾಟಕ ಹಾಗೂ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ತಾಲೂಕು ಘಟಕದಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.