ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ
Jul 10 2025, 12:47 AM ISTಚಿಕ್ಕಮಗಳೂರು, ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುವ ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು. ದುಡಿಯುವ ವರ್ಗಕ್ಕೆ ಕನಿಷ್ಠ ವೇತನ, ಸಾಮಾಜಿಕ ಭದ್ರತೆ ಒದಗಿಸಬೇಕೆಂದು ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ಸೇರಿದಂತೆ ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಕಾರ್ಮಿಕರು ಬುಧವಾರ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.