ನಾನು ಯಾರಿಗೂ ಠಕ್ಕರ್ ಕೊಡಲು ಇಲ್ಲಿಗೆ ಬಂದಿಲ್ಲ. ಇನ್ನೊಬ್ಬರನ್ನು ಮೆಚ್ಚಿಸುವುದಕ್ಕಾಗಿ ಉದ್ಯೋಗ ಮೇಳ ಮಾಡುತ್ತಿಲ್ಲ. ಜನರು ನನ್ನನ್ನು ನಂಬಿ ಮತ ಕೊಟ್ಟಿದ್ದಾರೆ. ಅವರ ಋಣ ತೀರಿಸುವ ಕೆಲಸ ಮಾಡುತ್ತಿದ್ದೇನೆ. ಇನ್ನೊಬ್ಬರು ಕೊಡುವ ಸರ್ಟಿಫಿಕೇಟ್ಗೆ ಕೆಲಸ ಮಾಡುವವನು ನಾನಲ್ಲ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ನವರು ಯಾವ ಅಭ್ಯರ್ಥಿಯನ್ನಾದರೂ ಹಾಕಲಿ, ನಮ್ಮದು ಕೇವಲ ದೇವೇಗೌಡರ ಕುಟುಂಬ ಅಲ್ಲ, ನಮ್ಮದು ಈಗ ಎನ್ಡಿಎ ಕುಟುಂಬ. ಎನ್ಡಿಎ ಕುಟುಂಬದಿಂದ ಒಬ್ಬ ಅಭ್ಯರ್ಥಿ ಇರುತ್ತಾನೆ. ಅಭ್ಯರ್ಥಿ ಆಯ್ಕೆಯಲ್ಲಿ ಯಾವ ಜಂಜಾಟವೂ ಇಲ್ಲ.
ಯೋಗೇಶ್ವರ್ ಯಾರ ಜತೆ ಈ ಮಾತನ್ನು ಹೇಳಿದ್ದಾರೋ ಗೊತ್ತಿಲ್ಲ. ಯೋಗೇಶ್ವರ್ ಒಮ್ಮೆ ನನ್ನನ್ನು ಭೇಟಿ ಮಾಡಿದ್ದರು. ನಾನು ಅವರಿಗೆ ಕ್ಷೇತ್ರಕ್ಕೆ ಹೋಗಿ ನಮ್ಮ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ವಿಶ್ವಾಸಕ್ಕೆ ತೆಗೆದುಕೊಳ್ಳಿ ಅಂತ ಹೇಳಿದ್ದೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ
ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರ ವಿರುದ್ಧ ಅಕ್ರಮ ಭೂ ಕಬಳಿಕೆ ಆರೋಪದಡಿ ಎಫ್ಐಆರ್ ದಾಖಲಾಗಿದ್ದು, ಅವರು ಕೂಡಲೇ ರಾಜೀನಾಮೆ ನೀಡಬೇಕೆಂದು ಕಾಂಗ್ರೆಸ್ ಮುಖಂಡ ಅ.ನಾ. ಹರೀಶ್ ಆಗ್ರಹಿಸಿದ್ದಾರೆ.