ಅಂದು ಕುಮಾರಸ್ವಾಮಿ, ಇಂದು ಬಿ.ವೈ.ವಿಜಯೇಂದ್ರ...!
Mar 05 2025, 12:35 AM ISTರಾಜಕೀಯವನ್ನೇ ಉಸಿರಾಗಿಸಿಕೊಂಡಿರುವ ಮಂಡ್ಯ ಜನರ ಮನಗೆಲ್ಲುವುದಕ್ಕೆ ದೋಸ್ತಿ ನಾಯಕರು ಸರ್ಕಸ್ ನಡೆಸುತ್ತಿದ್ದಾರೆ. ಅಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪಾಂಡವಪುರ ತಾಲೂಕು ಸೀತಾಪುರ ಗ್ರಾಮದಲ್ಲಿ ಕೆಸರು ಗದ್ದೆಗಿಳಿದು ಭತ್ತ ನಾಟಿ ಮಾಡಿ ರೈತರ ಮನಗೆಲ್ಲುವ ಪ್ರಯತ್ನ ನಡೆಸಿದ್ದರೆ, ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕೊತ್ತತ್ತಿ ಗ್ರಾಮದಲ್ಲಿ ಭತ್ತ ನಾಟಿ ಮಾಡಿ ಅನ್ನದಾತರ ವಿಶ್ವಾಸ ಗಳಿಸುವ ಪ್ರಯತ್ನ ನಡೆಸಿದ್ದಾರೆ.