ರಾಜ್ಯದ ಮುಖ್ಯಮಂತ್ರಿಗಳು ಜ್ಯೋತಿಷ್ಯ ಹೇಳೋಕೆ ಶುರು ಮಾಡಿದ್ದಾರೆ. ಈಗಾಗಲೇ ಮಂಡ್ಯದಲ್ಲಿ ನನ್ನನ್ನು ಸೋಲುತ್ತಾರೆ ಎಂದು ಜ್ಯೋತಿಷ್ಯ ಹೇಳಿದ್ದಾರೆ. ಉಳಿದವರ ಸೋಲು ಗೆಲುವಿನ ಬಗ್ಗೆಯೂ ಅವರನ್ನೇ ಕೇಳಿ ಹೇಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದರು.
ಜಿಲ್ಲಾ ಜೆಡಿಎಸ್ ವತಿಯಿಂದ ಹರಕೆರೆ ಶ್ರೀರಾಮೇಶ್ವರ ದೇವರಿಗೆ ರುದ್ರಾಭಿಷೇಕದೊಂದಿಗೆ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಜೆಡಿಎಸ್ ಉಪಾಧ್ಯಕ್ಷ, ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್, ನಗರ ಜೆಡಿಎಸ್ ಅಧ್ಯಕ್ಷ ದೀಪಕ್ ಸಿಂಗ್, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಕಡಿದಾಳು ಗೋಪಾಲ್ ಪೂಜೆ ಸಲ್ಸಿಸಿದರು.